ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕ್ರೌರ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಆಗತ್ಯ ಎಂದು ಪ್ರತಿಪಾದಿಸಿದ್ದಾರೆ.
ಪ್ರಾಣಿಗಳ ಮೇಲಿನ ಕ್ರೌರ್ಯದ ವಿರುದ್ಧ ಧ್ವನಿ ಎತ್ತಿದ ನಟಿ ಅನುಷ್ಕಾ - ನಟಿ ಸೋನಮ್ ಕಪೂರ್
ಬಾಲಿವುಡ್ ನಟಿ ಅನುಷ್ಕಾ ಶರ್ಮಾ Justice For Animals ಅಭಿಯಾನ ಶುರು ಮಾಡಿದ್ದಾರೆ. ಈ ಮೂಲಕ ಬೀದಿ ನಾಯಿಗಳ ರಕ್ಷಣೆಗೆ ಕೈ ಜೋಡಿಸಿದ್ದಾರೆ.
ಇತ್ತೀಚಿಗಷ್ಟೆ ಮುಂಬೈನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ನಾಯಿ ಬಗ್ಗೆ ನಟಿ ಸೋನಮ್ ಕಪೂರ್ ಫೇಸ್ಬುಕ್ಲ್ಲಿ ಬರೆದುಕೊಂಡಿದ್ದರು. ಮೂಕ ಪ್ರಾಣಿಯ ಮೇಲೆ ದುಷ್ಕರ್ಮಿಗಳ ಅಟ್ಟಹಾಸದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಈ ಪೋಸ್ಟ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದರು. ಈಗ ಕ್ರಿಕೆಟಿಗ ವಿರಾಟ್ ಕೋಹ್ಲಿ ಪತ್ನಿ ಅನುಷ್ಕಾ ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.
'ಕೇವಲ ಲಕ್ಕಿ (ನಾಯಿಯ ಹೆಸರು) ಮಾತ್ರವಲ್ಲ ನಿತ್ಯ ಸಾವಿರಾರು ಮೂಕ ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಮ್ಮ ದೇಶಾದ್ಯಂತ ಸಾಕಷ್ಟು ಶ್ವಾನಗಳು ಮನುಷ್ಯರ ಕ್ರೌರ್ಯಕ್ಕೆ ಬಲಿಯಾಗುತ್ತಿವೆ. ಈ ಹಿನ್ನೆಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960 ಅನ್ನು ತಿದ್ದುಪಡಿ ಮಾಡಬೇಕಾಗಿದೆ. ದೌರ್ಜನ್ಯ ನಡೆಸುವರ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಇದಕ್ಕಾಗಿ ಜಸ್ಟಿಸ್ ಫಾರ್ ಆ್ಯನಿಮಲ್ ಅಭಿಯಾನ ಶುರು ಮಾಡಿದ್ದಾರೆ.