ಕರ್ನಾಟಕ

karnataka

ETV Bharat / sitara

ಡ್ರಗ್ಸ್‌ ಪ್ರಕರಣ: ಶಾರುಖ್‌ ಪುತ್ರ ಆರ್ಯನ್‌ ಖಾನ್‌ ನಾಳೆ ಜೈಲಿನಿಂದ ಬಿಡುಗಡೆ

ಡ್ರಗ್ಸ್‌ ಪಾರ್ಟಿ ಪ್ರಕರಣದಲ್ಲಿ ಜಾಮೀನು ಪಡೆದಿರುವ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ನಾಳೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಜಾಮೀನು ನೀಡಿರುವ ಆದೇಶದ ಪ್ರತಿ ಆರ್ಥರ್‌ ರಸ್ತೆ ಜೈಲು ಅಧಿಕಾರಿಗಳಿಗೆ ತಲುಪಿದ ಬಳಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೈಲಿನಿಂದ ಬಿಡುಗಡೆಗೊಳಿಸಲಾಗುತ್ತದೆ.

Drugs case: HC orders Aryan to furnish Rs one lakh personal bond, asks him to surrender passport
ಡ್ರಗ್ಸ್‌ ಪ್ರಕರಣ: ಶಾರುಖ್‌ ಪುತ್ರ ಆರ್ಯನ್‌ ಖಾನ್‌ ನಾಳೆ ಜೈಲಿನಿಂದ ಬಿಡುಗಡೆ

By

Published : Oct 29, 2021, 7:11 PM IST

Updated : Oct 29, 2021, 8:06 PM IST

ಮುಂಬೈ: ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ಪ್ರಕರಣದಲ್ಲಿ ಆರ್ಥರ್‌ ರಸ್ತೆ ಜೈಲು ಸೇರಿ ಬಾಂಬೆ ಹೈಕೋರ್ಟ್‌ನಿಂದ ಜಾಮೀನು ಪಡೆದಿರುವ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ನಾಳೆ ಬಿಡುಗಡೆಗೊಳಿಸುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಯನ್ ಖಾನ್‌ ಜೈಲಿನಿಂದ ಬಿಡುಗಡೆಗಾಗಿ ಬಾಂಬೆ ಹೈಕೋರ್ಟ್ ಇಂದು ತನ್ನ ಆಪರೇಟಿವ್ ಆದೇಶವನ್ನು ಲಭ್ಯಗೊಳಿಸಿದ್ದು, ಒಂದು ಲಕ್ಷ ವೈಯಕ್ತಿಕ ಬಾಂಡ್‌ ಹಾಗೂ ಪಾಸ್‌ಪೋರ್ಟ್‌ ಒಪ್ಪಿಸುವುದು ಸೇರಿದಂತೆ 14 ಷರತ್ತುಗಳನ್ನು ಐದು ಪುಟಗಳ ಆದೇಶ ಪ್ರತಿಯಲ್ಲಿ ಸೂಚಿಸಿದೆ.

ಆರ್ಯನ್ ಖಾನ್ ಮತ್ತು ಅವರ ಇಬ್ಬರು ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚಾ ಅವರೂ ಸಹ ತಲಾ ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್‌ ಅಥವಾ ಇಬ್ಬರ ಶ್ಯೂರಿಟಿಯೊಂದಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಹೈಕೋರ್ಟ್ ನಿಗದಿಪಡಿಸಿದ ಷರತ್ತುಗಳ ಪ್ರಕಾರ, ಮೂವರು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯಕ್ಕೆ ತಮ್ಮ ಪಾಸ್‌ಪೋರ್ಟ್‌ಗಳನ್ನು ಸಲ್ಲಿಸಬೇಕು. ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆಯದೇ ಭಾರತವನ್ನು ತೊರೆಯಬಾರದು. ಪ್ರತಿ ಶುಕ್ರವಾರ ಎನ್‌ಸಿಬಿ ಕಚೇರಿಗೆ ಹಾಜರಾಗಬೇಕು ಎಂದು ತಿಳಿಸಿದೆ.

ಆರ್ಯನ್ ಖಾನ್‌ ಪರ ವಕೀಲರಿಗೆ ಆದೇಶ ಪ್ರತಿ

ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಎನ್ ಡಬ್ಲ್ಯೂ ಸಾಂಬ್ರೆ ಅವರು ಆಪರೇಟಿವ್ ಆದೇಶದ ಪ್ರತಿಗೆ ಸಹಿ ಹಾಕಿದ್ದಾರೆ. ಇದು ಆರ್ಯನ್ ಖಾನ್ ಅವರ ವಕೀಲರಿಗೆ ಸಂಜೆಯ ವೇಳೆಗೆ ತಲುಪಲಿದೆ. ಮುಂಬೈನ ಆರ್ಥರ್ ರೋಡ್ ಜೈಲು ಅಧಿಕಾರಿಗಳಿಗೆ ಜಾಮೀನು ಪ್ರತಿ ತಲುಪಿದ ಬಳಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆರ್ಯನ್‌ ಖಾನ್‌ ಬಿಡುಗಡೆ ಮಾಡಲಾಗುತ್ತದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ ದಾಳಿಯ ಸಂದರ್ಭದಲ್ಲಿ ಆರ್ಯನ್ ಖಾನ್ ಅವರನ್ನು ಎನ್‌ಸಿಬಿ ಅಧಿಕಾರಿಗಳು ಅಕ್ಟೋಬರ್‌ 2 ರಂದು ಬಂಧಿಸಿದ್ದರು. ಅಕ್ಟೋಬರ್‌ 8 ರಿಂದ ಅರ್ಥರ್‌ ಜೈಲಿನಲ್ಲಿರುವ ಆರ್ಯನ್‌ ಖಾನ್‌ಗೆ ನಿನ್ನೆ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಸಾಂಬ್ರೆ ಅವರಿದ್ದ ಏಕ ಸದಸ್ಯ ಪೀಠವು ಜಾಮೀನು ಮಂಜೂರು ಮಾಡಿತ್ತು.

ಶ್ಯೂರಿಟಿ ನೀಡಿದ ಜೂಹಿ ಚಾವ್ಲಾ

ಆರ್ಯನ್‌ ಖಾನ್‌ಗೆ ಜಾಮೀನು ನೀಡಲು 1 ಲಕ್ಷ ವೈಯಕ್ತಿಕ ಬಾಂಡ್‌ ಹಾಗೂ ಶ್ಯೂರಿಟಿ ನೀಡಲು ಕೋರ್ಟ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಬಾಲಿವುಡ್‌ ನಟಿ ಜೂಹಿ ಚಾವ್ಲಾ ಆರ್ಯನ್‌ಗೆ ಶ್ಯೂರಿಟಿ ನೀಡಿದ್ದಾರೆ. ಈ ಬಗ್ಗೆ ಕೋರ್ಟ್‌ ಹೊರಗಡೆ ಪ್ರತಿಕ್ರಿಯಿಸಿರುವ ಅವರು, ಎಲ್ಲ ಮುಗಿದು ಆರ್ಯನ್ ಖಾನ್ ಬೇಗ ಮನೆಗೆ ಬರಲಿದ್ದಾನೆ ಎಂಬ ಖುಷಿ ನನಗಿದೆ ಎಂದಿದ್ದಾರೆ.

ಇದನ್ನೂ ಓದಿ:ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ಪ್ರಕರಣ; ಶಾರುಖ್‌ ಖಾನ್‌ ಪುತ್ರ ಆರ್ಯನ್‌ಗೆ ಜಾಮೀನು ಮಂಜೂರು

Last Updated : Oct 29, 2021, 8:06 PM IST

ABOUT THE AUTHOR

...view details