ನವದೆಹಲಿ: ಬಾಲಿವುಡ್ನಲ್ಲಿ ಕೇಳಿ ಬರುತ್ತಿರುವ ಲೈಂಗಿಕ ದೌರ್ಜನ್ಯ, ಸ್ವಜನ ಪಕ್ಷಪಾತ ಆರೋಪಗಳು ರಾಜ್ಯಸಭೆಯಲ್ಲಿ ಸೋಮವಾರ ಪ್ರತಿಧ್ವನಿಸಿವೆ.
ಮಹಿಳೆಯರ ಘನತೆಯನ್ನು ಬಾಲಿವುಡ್ ಕಿತ್ತುಕೊಳ್ಳುತ್ತಿದೆ: ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ ಆಕ್ರೋಶ - ನಟ ಸುಶಾಂತ್ ಸಿಂಗ್ ಸಾವು ಪ್ರಕರಣ
ಬಿಜೆಪಿ ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ, ಬಾಲಿವುಡ್ನಲ್ಲಿ ಕೇಳಿ ಬರುತ್ತಿರುವ ಲೈಂಗಿಕ ದೌರ್ಜನ್ಯ, ಸ್ವಜನ ಪಕ್ಷಪಾತ ಆರೋಪಗಳ ಕುರಿತು ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ.
ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ
ಈ ಕುರಿತು ಧ್ವನಿ ಎತ್ತಿರುವ ಬಿಜೆಪಿ ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ, ಸಾಂಕೇತಿಕ ಪ್ರತಿಭಟನೆ ನಡೆಸಿದರು. ಸದನದಲ್ಲಿ ಫಲಕಗಳನ್ನು ಪ್ರದರ್ಶಿಸಿದ ಅವರು, ಈ ರೀತಿಯ ಸಂದೇಶ ರವಾನಿಸಿದ್ದಾರೆ. "ಬಾಲಿವುಡ್ನಲ್ಲಿ ಇನ್ನೆಷ್ಟು ಮಹಿಳೆಯರ ಘನತೆಗೆ ಧಕ್ಕೆಯಾಗಲಿದೆ?, ಇನ್ನೆಷ್ಟು ಜೀವಹಾನಿ(ಕೊಲೆ) ಸಂಭವಿಸಲಿದೆ" ಎಂದು ಪ್ರಶ್ನಿಸಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವು ಪ್ರಕರಣ ಮತ್ತು ಪಾಯಲ್ ಘೋಷ್ ಮೇಲೆ ಖ್ಯಾತ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ವಿಚಾರ ರಾಜ್ಯಸಭೆಯಲ್ಲಿ ಮುನ್ನೆಲೆಗೆ ಬಂದಿದೆ.