ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂಬೈ ಹೈಕೋರ್ಟ್ ನಡೆಸಲಿದೆ. ಕಂಗನಾ ತಮ್ಮ ಟ್ವೀಟ್ ಮೂಲಕ ಧಾರ್ಮಿಕ ಅಸಮಾನತೆ ಸೃಷ್ಟಿಸುತ್ತಾರೆ ಎಂಬ ಆರೋಪದಡಿ ಆಕೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇಂದು ಮುಂಬೈ ಹೈಕೋರ್ಟ್ನಿಂದ ಎಫ್ಐಆರ್ ರದ್ದು ಕೋರಿ ಕಂಗನಾ ಸಲ್ಲಿಸಿದ್ದ ಅರ್ಜಿ ವಿಚಾರಣೆ
ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ಅರ್ಜಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ಬಾಂಬೈ ಹೈಕೋರ್ಟ್ನಲ್ಲಿ ನಡೆಯಲಿದೆ.
ಬಾಲಿವುಡ್ನಲ್ಲಿ ಮುಸ್ಲಿಂ ಮತ್ತು ಹಿಂದೂ ನಟರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ನಟಿ ಕಂಗನಾ ರಣಾವತ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರೋಪಿಸಿದ್ದರು. ಇದಕ್ಕೂ ಮುನ್ನ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ಸೆಲಬ್ರಿಟಿಯಾಗಿ ಜನರಿಗೆ ಮಾದರಿಯಾಗುವ ಬದಲು ಸಾಮಾಜಿಕ ದ್ವೇಷ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಹಿಲ್ ಅಶ್ರಫ್ ಎಂಬುವವರು ಬಾಂದ್ರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನಂತರ ಕಂಗನಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆದರೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾಗೊಳಿಸಬೇಕೆಂದು ಕಂಗನಾ ಹಾಗೂ ಅವರ ತಂಗಿ ಬಾಂಬೈ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.