ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಆರೋಪಿ ಆದಿತ್ಯ ಆಳ್ವಾನ ಸಹೋದರಿ ಆಗಿರುವ ಕಾರಣ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಾಗೆ ನೋಟಿಸ್ ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: ನಟ ವಿವೇಕ್ ಒಬೆರಾಯ್ ಪತ್ನಿಗೆ ಸಿಸಿಬಿ ನೋಟಿಸ್ - CCB notice to Aditya alva sister Priyanka alva
ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಾಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ನಟ ವಿವೇಕ್ ಒಬೆರಾಯ್ ಪತ್ನಿಗೆ ಸಿಸಿಬಿ ನೋಟಿಸ್
ಪ್ರಿಯಾಂಕಾ ಆಳ್ವಾಗೆ ಇಂದು ಮಧ್ಯಾಹ್ನ ಎರಡು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ವೇಳೆ ಸಿಸಿಬಿ ಡಿಸಿಪಿ ರವಿಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ವಿಚಾರಣೆ ವೇಳೆ ಆದಿತ್ಯ ಆಳ್ವಾನ ಕುರಿತು ಮಾಹಿತಿ ಪಡೆಯುವ ಸಾಧ್ಯತೆಯಿದೆ.
ನಿನ್ನೆ ಮುಂಬೈ ಬಳಿ ಇರುವ ನಟ ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
Last Updated : Oct 16, 2020, 11:48 AM IST
TAGGED:
CCB notice to Priyanka alva