ನವದೆಹಲಿ:ಬಾಲಿವುಡ್ ಸ್ಟಾರ್ ಜೋಡಿಯಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅಧಿಕೃತವಾಗಿ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ರಾಜಸ್ಥಾನದ ಸಿಕ್ಸ್ ಸೆನ್ಸಸ್ ಪೋರ್ಟ್ ಬವೇರಾದಲ್ಲಿ ಅದ್ಧೂರಿಯಾಗಿ ಹಮ್ಮಿಕೊಂಡಿದ್ದ ಮದುವೆ ಸಮಾರಂಭದಲ್ಲಿ ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಕತ್ರಿನಾಗೆ, ವಿಕ್ಕಿ ಕೌಶಲ್ ಮಾಂಗಲ್ಯಧಾರಣೆ ಮಾಡುವುದರೊಂದಿಗೆ ಸಪ್ತಪದಿ ತುಳಿದಿದ್ದಾರೆ.