ಮುಂಬೈ:ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ 19 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಗಾಗಿ ಆರ್ಥರ್ ಜೈಲಿನಲ್ಲಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇದೀಗ ಧಾರ್ಮಿಕ ಪುಸ್ತಕಗಳನ್ನು ಓದಲು ಮುಂದಾಗಿದ್ದಾರೆ. ತಮಗೆ ಧಾರ್ಮಿಕ ಪುಸ್ತಕಗಳನ್ನು ನೀಡುವಂತೆ ಜೈಲು ಆಧಿಕಾರಿಗಳಿಗೆ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೈಲಿನಲ್ಲಿರುವ ಆರ್ಯನ್ ಖಾನ್ ಆರಂಭದಲ್ಲಿ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಆದರೆ ಈಗ ಅವರು ಇತರ ಕೆಲವು ಕೈದಿಗಳೊಂದಿಗೆ ಮಾತನಾಡುತ್ತಿದ್ದಾರೆ. ತಮ್ಮ ಬ್ಯಾರಕ್‌ನಲ್ಲಿ ನಿರ್ಮಿಸಲಾಗಿರುವ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ ಆರತಿ ನಡೆಯುತ್ತದೆ. ಆರತಿ ಮುಗಿಯುವವರೆಗೂ ಅವರು ಅಲ್ಲಿಯೇ ಇರುತ್ತಾರೆ ಎಂದು ಜೈಲಿನ ಆಡಳಿತದ ಮೂಲಗಳು ತಿಳಿಸಿವೆ.