ಇಂದು ಇಹಲೋಕ ತ್ಯಜಿಸಿದ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ಮುಂಬೈನ ಸಾಂತಕ್ರೂಜ್‌ನಲ್ಲಿರುವ ಜುಹು ಕಬ್ರಾಸ್ತಾನ್‌ನಲ್ಲಿ ನೆರವೇರಿಸಲಾಯಿತು. ಸಕಲ ಸರ್ಕಾರಿ ಗೌರಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಿತು.
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಆಪ್ತ ಸ್ನೇಹಿತನ ಕೊನೆಯ ವಿಧಿ-ವಿಧಾನಗಳಲ್ಲಿ ಭಾಗವಹಿಸಿದ್ದರು. ಹಿರಿಯ ನಟ ದಿಲೀಪ್ ಕುಮಾರ್ ಅವರ ಕುಟುಂಬ, ಸ್ನೇಹಿತರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಜುಹು ಕಬ್ರಾಸ್ತಾನ್‌ನಲ್ಲಿ ಅವರ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು.