ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಹು ನಿರೀಕ್ಷಿತ 'ಝುಂಡ್' ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಕಳೆದ ವರ್ಷವೇ ತೆರೆ ಕಾಣಬೇಕಿದ್ದ ಈ ಸಿನಿಮಾ ಬಿಡುಗಡೆಯನ್ನ ಕೋವಿಡ್ ಕಾರಣದಿಂದ ಅನೇಕ ಬಾರಿ ಮುಂದೂಡಲಾಗಿತ್ತು. ಇದೀಗ ಅಂತಿಮ ಡೇಟ್ ಅನ್ನು ಫಿಕ್ಸ್ ಮಾಡಲಾಗಿದ್ದು, ಮುಂದಿನ ತಿಂಗಳು ಮಾರ್ಚ್ 4 ರಂದು ತೆರೆಗೆ ಅಪ್ಪಳಿಸಲಿದೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅಮಿತಾಬ್ ಬಚ್ಚನ್, "ನಮ್ಮ ತಂಡ ರೆಡಿ ಇದೆ. ನಾವು ಬರ್ತಾ ಇದೀವಿ. ನೀವು ರೆಡಿನಾ? ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಮಾರ್ಚ್ 4, 2022 ರಂದು 'ಝುಂಡ್' ಬಿಡುಗಡೆಯಾಗುತ್ತಿದೆ" ಎಂದು ಬರೆದುಕೊಂಡಿದ್ದಾರೆ.