ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ ( ಸಿಬಿಐ)ಕ್ಕೆ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿ ಕೋಟಕ್ ಮಹೀಂದ್ರಾ ಸಮೂಹದ ಮುಖ್ಯ ಸಂವಹನಾಧಿಕಾರಿ ರೋಹಿತ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಶಾಂತ್ ಸಾವಿನ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಕೋಟಕ್ ಮಹೀಂದ್ರಾ ಸ್ಪಷ್ಟನೆ - ಸುಶಾಂತ್ಸಿಂಗ್ ಪ್ರಕರಣ ಸಿಬಿಐ ತನಿಖೆ
ಎಂದಿನಂತೆ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಬ್ಯಾಂಕ್ ಗ್ರಾಹಕರ ವೈಯುಕ್ತಿಕ ಮತ್ತು ಗೌಪ್ಯ ಮಾಹಿತಿಗಳನ್ನು ಮಾಧ್ಯಮ ಮತ್ತು ಇತರ ಬಾಹ್ಯ ಮೂಲಗಳಿಗೆ ತಿಳಿಸುವುದಿಲ್ಲ ಎಂದು ಕೋಟಕ್ ಮಹೀಂದ್ರಾ ಸ್ಪಷ್ಟಪಡಿಸಿದೆ.
ಎಂದಿನಂತೆ ಈ ಪ್ರಕರಣದ ತನಿಖೆಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಆದ್ರೆ ಬ್ಯಾಂಕ್ ಗ್ರಾಹಕರ ವೈಯುಕ್ತಿಕ ಮತ್ತು ಗೌಪ್ಯ ಮಾಹಿತಿಗಳನ್ನು ಮಾಧ್ಯಮ ಮತ್ತು ಇತರ ಬಾಹ್ಯ ಮೂಲಗಳಿಗೆ ತಿಳಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ದಯವಿಟ್ಟು ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತ ಮತ್ತು ಸುಳ್ಳು ಮಾಹಿತಿಗಳನ್ನು ಹಂಚುತ್ತಿರುವವರಿಗೆ ತಲುಪಿಸಿ ಎಂದು ರಾವ್ ಹೇಳಿದ್ದಾರೆ.
ಆರಂಭದಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದ ಪಾಟ್ನಾ ಪೊಲೀಸರು ಕೋಟಕ್ ಮಹಿಂದ್ರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು. ಆಗಸ್ಟ್ 19 ರಂದು ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರಿದ್ದ ಏಕ ಸದಸ್ಯ ಪೀಠ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಬಿಹಾರ ಸರ್ಕಾರಕ್ಕೆ ಸೂಚಿಸಿತ್ತು ಮತ್ತು ಈವರೆಗೆ ಸಂಗ್ರಹಿಸಿದ ಎಲ್ಲಾ ಸಾಕ್ಷಿಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಮುಂಬೈ ಪೊಲೀಸರಿಗೆ ಆದೇಶಿಸಿತ್ತು.