ತೀವ್ರ ಉಸಿರಾಟದ ತೊಂದರೆಯಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ: ಕುಟುಂಬ ಮೂಲಗಳಿಂದ ಮಾಹಿತಿ - ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ನಾವು ನಿಮಗೆ ಎಲ್ಲಾ ವಿಷಯವನ್ನು ಅಪ್ಡೇಟ್ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ನಿನ್ನೆ ಬೆಳಗಿನ ಜಾವ 3 ಗಂಟೆ ವೇಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಲತಾ ಮಂಗೇಶ್ಕರ್ ಕುಟುಂಬದ ಸದಸ್ಯರು, 'ಲತಾಜಿ ಆರೋಗ್ಯ ಈಗ ಸ್ಥಿರವಾಗಿದೆ. ನಿನ್ನೆ ಸ್ವಲ್ಪ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ ಇದೀಗ ಆ ತೊಂದರೆಯಿಂದ ಹೊರಬಂದಿದ್ದಾರೆ. ಲತಾಜಿ ಗಾಯಕಿಯಾದ್ದರಿಂದ ಸಾಮಾನ್ಯವಾಗಿ ಅವರಿಗೆ ಶ್ವಾಸಕೋಶ ಕೆಲಸ ಮಾಡುವ ಸಾಮರ್ಥ್ಯ ಕಡಿಮೆ ಆಗಿದ್ದು, ಆ ಕಾರಣದಿಂದ ಉಸಿರಾಟದ ಸಮಸ್ಯೆ ಕಂಡುಬಂದಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ನಾವು ನಿಮಗೆ ಎಲ್ಲಾ ವಿಷಯವನ್ನು ಅಪ್ಡೇಟ್ ಮಾಡುತ್ತೇವೆ' ಎಂದು ತಿಳಿಸಿದ್ದಾರೆ.