ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಹನಿಮೂನ್ಗಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ನಟಿ ತಮ್ಮ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಕಳೆದ ತಿಂಗಳು ಸೂರಜ್ ನಂಬಿಯಾರ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರದಲ್ಲಿದ್ದಾರೆ. ಅಲ್ಲಿ ಬೀಳುತ್ತಿರುವ ಹಿಮದಲ್ಲಿ ಮೌನಿ ಅವರು ಕಪ್ಪು ಮೊನೊಕಿನಿ ಬಿಕಿನಿಯಲ್ಲಿ ಸೊಗಸಾದ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.