ನವದೆಹಲಿ:ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ನೀರಜ್ ಚೋಪ್ರಾ ಇತಿಹಾಸ ರಚನೆ ಮಾಡಿದ್ದು, ಅವರ ಸಾಧನೆಗೆ ಇನ್ನಿಲ್ಲದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಅಮರಾವತಿ ಕ್ಷೇತ್ರದ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅಭಿನಂದನೆ ಸಲ್ಲಿಸಿದ್ದು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್ ಚೋಪ್ರಾ ಹಾಗೂ ಅವರ ಕುಟುಂಬಕ್ಕೆ ಅಭಿನಂದನೆಗಳು. ನೀರಜ್ ಅವರ ಸಾಧನೆ ಕೋಟ್ಯಂತರ ಯುವ ಪ್ರತಿಭೆಗಳಿಗೆ ಪ್ರೇರಣೆಯಾಗಲಿದ್ದು, ಬರುವ ದಿನಗಳಲ್ಲಿ ಭಾರತದ ಅನೇಕ ಕ್ರೀಡಾಪಟುಗಳು ವಿದೇಶಕ್ಕೆ ತೆರಳಿ ಇಂತಹ ಸಾಧನೆ ಮಾಡಲಿದ್ದಾರೆ ಎಂದಿದ್ದಾರೆ.