ಮುಂಬೈ (ಮಹಾರಾಷ್ಟ್ರ): ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಬಾಲಿವುಡ್ ನಟ ಟೈಗರ್ ಶ್ರಾಫ್ ಹಾಗೂ ನಟಿ ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಿನ್ನೆ ಮಧ್ಯಾಹ್ನ 2 ಗಂಟೆಯ ಮೇಲೆ ಬ್ಯಾಂಡ್‌ಸ್ಟ್ಯಾಂಡ್ ಬಳಿ ಟೈಗರ್ ಶ್ರಾಫ್ ಹಾಗೂ ದಿಶಾ ಪಟಾನಿ ತಿರುಗಾಡುತ್ತಿರುವುದು ಕಂಡುಬಂದಿದೆ. ಯಾವುದೇ ಸರಿಯಾದ ಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುವ ಮೂಲಕ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆದರೆ ಇದು ಜಾಮೀನು ಸಹಿತ ಅಪರಾಧವಾಗಿದ್ದರಿಂದ ಇವರನ್ನು ಬಂಧಿಸಿಲ್ಲ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.