ಮುಂಬೈ (ಮಹಾರಾಷ್ಟ್ರ):ಬಾಲಿವುಡ್ ನಟ ಶಾರುಖ್ ಖಾನ್ ತಮ್ಮ ಪುತ್ರ ಆರ್ಯನ್ ಖಾನ್ ಅವರನ್ನು ಆರ್ಥರ್ ರೋಡ್ ಜೈಲಲ್ಲಿ ಭೇಟಿ ಮಾಡಿ ಬರುತ್ತಿದ್ದಂತೆ ಅವರ ನಿವಾಸದ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೊಂದೆಡೆ, ನಟಿ ಅನನ್ಯಾ ಪಾಂಡೆ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಶಾರುಖ್ ನಿವಾಸ ಮನ್ನತ್‌ನಲ್ಲಿ ಎನ್‌ಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ನಟಿ ಅನನ್ಯಾ ಪಾಂಡೆ ಅವರು ಆರ್ಯಖಾನ್ ಜೊತೆ ವಾಟ್ಸಪ್ ಚಾಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಧಿಕಾರಿಗಳು ಈ ಬಗ್ಗೆ ಶೋಧ ಕಾರ್ಯ ನಡೆಸಿದ್ದಾರೆ.