ನವದೆಹಲಿ: 2013ರಲ್ಲಿ ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿರುವ ನಟಿ ಪಾಯಲ್ ಘೋಷ್ ಇದೀಗ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರನ್ನ ಭೇಟಿ ಮಾಡಿದರು.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಿದ ಪಾಯಲ್ ಘೋಷ್! - Anurag Kashyap Latest news
ಬಾಲಿವುಡ್ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಿರುವ ನಟಿ ಪಾಯಲ್ ಘೋಷ್ ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯನ್ನ ಭೇಟಿ ಮಾಡಿದರು.
Payal Ghosh
ಭೇಟಿ ವೇಳೆ ಅವರು ತಮಗೆ ಎಲ್ಲ ರೀತಿಯ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ನಟಿ ಹೇಳಿದ್ದಾರೆ. ಇದೇ ವೇಳೆ ತಾವು ಮಹಾರಾಷ್ಟ್ರ ಗೃಹ ಸಚಿವರಿಗೆ Y ಮಟ್ಟದ ಭದ್ರತೆ ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.
ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ (ಮೀಟೂ) ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್, ವೆರ್ಸೋವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.