ಮುಂಬೈ: ಬಾಲಿವುಡ್ನ ಖ್ಯಾತ ಹಿನ್ನೆಲೆ ಗಾಯಕ ಕುಮಾರ್ ಸಾನು (62) ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಸಾನು ಅವರ ಸಾಮಾಜಿಕ ಜಾಲತಾಣದ ತಂಡ (Team KS) ಈ ಬಗ್ಗೆ ಫೇಸ್ಬುಕ್ ಪೇಜ್ನಲ್ಲಿ ಅಭಿಮಾನಿಗಳಿಗೆ ಈ ವಿಚಾರವನ್ನು ಖಚಿತಪಡಿಸಿದೆ. "ದುರಾದೃಷ್ಟವಶಾತ್, ಸಾನು ಅವರ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥಿಸೋಣ" ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ.