ಹೈದರಾಬಾದ್: ಸೌತ್ ಇಂಡಸ್ಟ್ರಿಯಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‌ಗೆ ಲಗ್ಗೆಇಟ್ಟಿದ್ದು, ಚಿತ್ರ ನಿರ್ಮಾಪಕ ವಿಕಾಸ್ ಬಹ್ಲ್ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಇದು ಅವರ ಎರಡನೇ ಬಾಲಿವುಡ್ ಸಿನಿಮಾವಾಗಲಿದ್ದು, ಈ ಸಿನಿಮಾದಲ್ಲಿ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದಾರೆ.
ರಶ್ಮಿಕಾ ಮುಂದಿನ ವರ್ಷ ಸಿದ್ದಾರ್ಥ್ ಮಲ್ಹೋತ್ರಾ ಅವರೊಂದಿಗೆ ಮಿಷನ್ ಮಜ್ನು ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸಲಿದ್ದಾರೆ. ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ವಿಷಯ ಹಂಚಿಕೊಂಡ ಕೆಲವೇ ದಿನಗಳಲ್ಲಿ ರಶ್ಮಿಕಾ ಮತ್ತೊಂದು ಹಿಂದಿ ಚಿತ್ರದಲ್ಲಿ ನಟಿಸಲಿರುವ ಸುದ್ದಿ ರೌಂಡ್ಸ್ ಹೊಡೆಯಲು ಶುರುವಾಗಿದೆ.