ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ನಟಿ ರಿಯಾ ಚಕ್ರವರ್ತಿಯನ್ನು ಎನ್ಸಿಬಿ ಬಂಧಿಸಿದೆ.
ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಅರೆಸ್ಟ್ - ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ನಟಿ ರಿಯಾ ಚಕ್ರವರ್ತಿಯನ್ನು ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) ಬಂಧಿಸಿದೆ.
![ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಅರೆಸ್ಟ್ Rhea Chakraborty arrested by NCB](https://etvbharatimages.akamaized.net/etvbharat/prod-images/768-512-8725211-thumbnail-3x2-megha.jpg)
ಸುಶಾಂತ್ ಸಾವಿನ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಭೇದಿಸಲಾಗುತ್ತಿದ್ದು, ಡ್ರಗ್ಸ್ ಲಿಂಕ್ ಕುರಿತ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಕಳೆದ ಮೂರು ದಿನಗಳಿಂದ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) ರಿಯಾ ಚಕ್ರವರ್ತಿಯ ವಿಚಾರಣೆ ನಡೆಸುತ್ತಿದೆ. ಇಂದೂ ಕೂಡ ಬೆಳಗ್ಗೆಯಿಂದ ನಟಿಯನ್ನು ವಿಚಾರಣೆಗೊಳಪಡಿಸಿದ್ದ ಎನ್ಸಿಬಿ ಅಧಿಕಾರಿಗಳು ಇದೀಗ ಬಂಧಿಸಿದ್ದಾರೆ.
ಮಾದಕ ವಸ್ತು ನಿಯಂತ್ರಣ ಕಾಯ್ದೆ (NDPS) ಸೇರಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ರಿಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ರಿಯಾರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗುವುದು ಹಾಗೂ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಹಾಜರು ಪಡಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.