ಮುಂಬೈ:ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ನ ಯುವ ನಟಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿಗೆ ಇದೀಗ ಅತ್ಯಾಚಾರ ಹಾಗೂ ಕೊಲೆ ಮಾಡುವ ಬೆದರಿಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ನಟಿ ರಿಯಾ ಚಕ್ರವರ್ತಿಗೆ ಅತ್ಯಾಚಾರ, ಕೊಲೆ ಬೆದರಿಕೆ: ಸೈಬರ್ ಕ್ರೈಂ ಪೊಲೀಸರಿಗೆ ಮೊರೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿ ಹೆಸರೂ ಸಹ ಕೇಳಿ ಬಂದಿದ್ದು, ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Rhea Chakraborty
ಸುಶಾಂತ್ ಸಿಂಗ್ ಆತ್ಮಹತ್ಯೆಯ ನಂತರ ಹೆಚ್ಚು ಸುದ್ದಿಯಲ್ಲಿರುವ ನಟಿ ರಿಯಾ ವಿರುದ್ಧ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಇದೀಗ ಕೆಲ ದುಷ್ಕರ್ಮಿಗಳು ಆಕೆಗೆ ಬೆದರಿಕೆ ಹಾಕಿದ್ದಾರೆ.