ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮುಂಬೈನಲ್ಲಿ ನಡೆದಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಬಿಹಾರ ಸರ್ಕಾರ ಸಿಬಿಐಗೆ ಹಸ್ತಾಂತರಿಸುವುದು ಅಸಾಧ್ಯ ಎಂದು ನಟಿ ರಿಯಾ ಚಕ್ರವರ್ತಿ ಪರ ವಕೀಲರು ಹೇಳಿದ್ದಾರೆ.
ಸುಶಾಂತ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಬಿಹಾರ ಸರ್ಕಾರಕ್ಕೆ ಅಧಿಕಾರವಿಲ್ಲ: ರಿಯಾ ಪರ ವಕೀಲ - ನಟ ಸುಶಾಂತ್ ಸಿಂಗ್ ರಜಪೂತ್
ಬಿಹಾರ ಪೊಲೀಸರಿಗೆ ಪ್ರಕರಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ವಕೀಲ ಸತೀಶ್ ಮನೇಶಿಂದೆ ಹೇಳಿದ್ದಾರೆ.
ನಟಿ ರಿಯಾ ಪರ ವಕೀಲ
ಬಿಹಾರ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಲು ಯಾವುದೇ ಕಾನೂನು ಆಧಾರವಿಲ್ಲ. ಬಿಹಾರ ಪೊಲೀಸರಿಗೆ ಪ್ರಕರಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ವಕೀಲ ಸತೀಶ್ ಮನೇಶಿಂದೆ ಹೇಳಿದ್ದಾರೆ.
ಮುಂಬೈ ಪೊಲೀಸರು ಈಗಾಗಲೇ ಆಕ್ಸಿಡೆಂಟಲ್ ಡೆತ್ ರಿಪೋರ್ಟ್ (ಎಡಿಆರ್) ದಾಖಲಿಸಿರುವುದರಿಂದ ಈ ಪ್ರಕರಣದ ತನಿಖೆ ನಡೆಸಲು ಬಿಹಾರ ಪೊಲೀಸರಿಗೆ ಯಾವುದೇ ನ್ಯಾಯವ್ಯಾಪ್ತಿ ಇಲ್ಲ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.