ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಜೋಧಪುರ ನ್ಯಾಯಾಲಯ ವಜಾಗೊಳಿಸಿದೆ.
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ರಿಲೀಫ್: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಬ್ಯಾಡ್ ಬಾಯ್ - ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ರಿಲೀಫ್
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಜೋಧಪುರ ನ್ಯಾಯಾಲಯ ವಜಾಗೊಳಿಸಿದೆ.
![ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ರಿಲೀಫ್: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಬ್ಯಾಡ್ ಬಾಯ್ Salman Khan gets relief in Blackbuck poaching case](https://etvbharatimages.akamaized.net/etvbharat/prod-images/768-512-10595999-thumbnail-3x2-smk.jpg)
ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಬ್ಯಾಡ್ ಬಾಯ್
ಈ ವಿಚಾರವಾಗಿ ಸಲ್ಮಾನ್ ಖಾನ್ ತಮ್ಮ ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಖಾನ್, ನನ್ನೆಲ್ಲಾ ಅಭಿಮಾನಿಗಳ ಪ್ರೀತಿಯ ಬೆಂಬಲ ಮತ್ತು ಕಾಳಜಿಗೆ ಧನ್ಯವಾದಗಳು. ನಿಮ್ಮ ಕುಟುಂಬವನ್ನು ನೋಡಿಕೊಳ್ಳಿ, ದೇವರು ನಿಮಗೆ ಆಶೀರ್ವದಿಸುತ್ತಾನೆ ಎಂದು ಬರೆದುಕೊಂಡಿದ್ದಾರೆ.
ಸಿನಿಮಾವೊಂದರ ಶೂಟಿಂಗ್ ವೇಳೆ ಜೋಧಪುರ್ ಬಳಿ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡಿರುವ ಕುರಿತು ಅವರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.