ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಟೈಗರ್ 3 ಸಿನಿಮಾಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇನ್ನು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಮಂಗಳವಾರ ಸಲ್ಲು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
'ಟೈಗರ್-3'ಗೆ ಸಲ್ಮಾನ್ ಖಾನ್ ಭರ್ಜರಿ ತಯಾರಿ: ವರ್ಕೌಟ್ ವಿಡಿಯೋ ವೈರಲ್ - Salman Khan upcoming movie
ಸಲ್ಮಾನ್ ಖಾನ್ ಟೈಗರ್ 3 ಸಿನಿಮಾಗೆ ಭರ್ಜರಿ ತಯಾರಿ ನಡೆಸುತ್ತಿದ್ದು, ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇದೀಗ ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಸಲ್ಮಾನ್ ಖಾನ್
ಈ ವಿಡಿಯೋಗೆ ಶೀರ್ಷಿಕೆ ನೀಡಿರುವ ಅವರು, "ಟೈಗರ್ 3 ಗಾಗಿ ತರಬೇತಿ ಪಡೆಯುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಟೈಗರ್ ಸಿನಿಮಾದ ಥೀಮ್ ಸಾಂಗ್ನ್ನು ಬಳಸಿಕೊಂಡಿದ್ದಾರೆ.
ಕಬೀರ್ ಖಾನ್ ನಿರ್ದೇಶನದ ಮೊದಲ ಸಿರೀಸ್ 'ಏಕ್ ಥಾ ಟೈಗರ್' 2012 ರಲ್ಲಿ ಬಿಡುಗಡೆಯಾಯಿತು. ಬಳಿಕ ಎರಡನೇ 'ಟೈಗರ್ ಜಿಂದಾ ಹೈ' 2017 ರಲ್ಲಿ ಬಿಡುಗಡೆಯಾಯಿತು. ಅದನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ. ಇನ್ನು ಮುಂಬರುವ ಟೈಗರ್ 3 ಸಿನಿಮಾದಲ್ಲಿ ನಟ ಇಮ್ರಾನ್ ಹಶ್ಮಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿದೆ.