ಮುಂಬೈ: ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಟ ಸಂಜಯ್ ದತ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಆಗಸ್ಟ್ 8 ರಂದು ಎದೆನೋವು ಹಾಗೂ ಉಸಿರಾಟದ ತೊಂದರೆಯಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಡಿಸ್ಚಾರ್ಜ್ ಆಗಿದ್ದಾರೆ.
ಆಗಸ್ಟ್ 8 ರಂದು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಸಂಜಯ್ ದತ್ ದಾಖಲಾಗಿದ್ದರು. ಇವರ ಕೋವಿಡ್ ವರದಿ ಕೂಡ ನೆಗೆಟಿವ್ ಬಂದಿತ್ತು. ದತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ನಿನ್ನೆ ವೈದ್ಯರು ಹೇಳಿದ್ದರು. ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಿದ ಒಂದು ದಿನದ ಬಳಿಕವೂ ಕೂಡ ನಟನ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿತ್ತು.
ಜುಲೈ 29 ರಂದು 61 ನೇ ವರ್ಷಕ್ಕೆ ಕಾಲಿಟ್ಟಿರುವ ಮುನ್ನಾಬಾಯ್, ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ 'ಕೆಜಿಎಫ್ ಚಾಪ್ಟರ್-2ರಲ್ಲಿ 'ಅಧೀರ'ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ನಟನೆಯ ಮಹೇಶ್ ಭಟ್ ನಿರ್ದೇಶನದ ಸಡಕ್-2 ಸಿನಿಮಾ ಆಗಸ್ಟ್ 28 ರಂದು ಒಟಿಟಿ ಫ್ಲಾಟ್ಫಾರ್ಮ್ನಲ್ಲಿ ರಿಲೀಸ್ ಆಗಲಿದೆ.