ಮುಂಬೈ: ಉಸಿರಾಟದ ತೊಂದರೆ ಹಾಗೂ ಅನಾರೋಗ್ಯದ ಕಾರಣ ಕಳೆದ ಕೆಲ ದಿನಗಳ ಹಿಂದೆ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸಂಜಯ್ ದತ್ಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕನ್ಫರ್ಮ್ ಆಗಿದ್ದು, ಹೆಚ್ಚಿನ ಚಿಕಿತ್ಸೆಗೋಸ್ಕರ ಅವರು ಯುಎಸ್ಗೆ ಪ್ರಯಾಣ ಬೆಳೆಸಲಿದ್ದಾರೆ.
ಬಾಲಿವುಡ್ ನಟ ಸಂಜಯ್ ದತ್ಗೆ ಶ್ವಾಸಕೋಶದ ಕ್ಯಾನ್ಸರ್! - ಸಂಜಯ್ ದತ್ಗೆ ಕ್ಯಾನ್ಸರ್
ಬಾಲಿವುಡ್ನ ಹಿರಿಯ ನಟ ಸಂಜಯ್ ದತ್ ಇದೀಗ ಹೆಚ್ಚಿನ ಚಿಕಿತ್ಸೆಗೋಸ್ಕರ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದು, ಇದೇ ವಿಷಯವಾಗಿ ಅವರು ಟ್ವೀಟ್ ಮಾಡಿದ್ದಾರೆ.
61 ವರ್ಷದ ನಟ ಕಳೆದ ಶನಿವಾರದಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ 4ನೇ ಹಂತದ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ. ಇನ್ನು ತಾವು ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುತ್ತಿರುವುದಾಗಿ ಟ್ವೀಟ್ ಮಾಡಿರುವ ಅವರು, ನನಗೆ ಚಿಕಿತ್ಸೆಯ ಅವಶ್ಯಕತೆ ಇದೆ. ನನ್ನ ಸ್ನೇಹಿತರು, ಕುಟುಂಬಸ್ಥರು ನನ್ನೊಂದಿಗಿದ್ದಾರೆ. ವದಂತಿ ನಂಬಬೇಡಿ. ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸದ್ಯ ಅವರು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2ರಲ್ಲಿ ನಟನೆ ಮಾಡಿದ್ದು, ಅಧೀರ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.