ಬಾಲಿವುಡ್ ನಟಿ ಸಾರಾ ಅಲಿ ಖಾನ್ ತಮ್ಮ ತಾಯಿಯೊಂದಿಗೆ ಇತ್ತೀಚೆಗೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದರು. ಆ ಕ್ಷಣದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿರುವ ಅವರು ಜೈ ಮಹಾಕಾಳೇಶ್ವರ, ಜೈ ಭೋಲೇನಾಥ್ ಎಂಬ ಹ್ಯಾಶ್ಟ್ಯಾಗ್ ಹಾಕಿಕೊಂಡಿದ್ದಾರೆ. ಫೋಟೋಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡಿದ್ದಾರೆ. ಸಾರಾ ಅಲಿ ಖಾನ್ ಅದಕ್ಕೂ ಮುನ್ನ ಕೇದಾರನಾಥ ದೇವಾಲಯಕ್ಕೂ ಭೇಟಿ ನೀಡಿದ್ದರು. ಹಾಗಾಗಿ ಅವರ ಅಭಿಮಾನಿಗಳು ತಮ್ಮ ನಟಿಯನ್ನು ಜಾಲತಾಣದಲ್ಲಿ ಹಾಡಿ ಹೊಗಳಿದ್ದಾರೆ.
ಅವರ ನಟನೆಯ ‘ಅತರಂಗಿ ರೇ’ ಚಿತ್ರವೂ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗೆಲುವಿನ ಅಲೆಯಲ್ಲಿರುವ ನಟಿಯು ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ.