ಹೈದರಾಬಾದ್ :ಪತಿ ರಾಜ್ ಕುಂದ್ರಾ ಬಂಧನದ ಬಳಿಕ ತೆರೆಯಿಂದ ಮರೆಯಾದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಈಗ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ಗ್ರ್ಯಾಂಡ್ ಕಮ್ ಬ್ಯಾಕ್ ಹೇಳಿದ್ದಾರೆ. ಬಹಳ ದಿನಗಳ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಗ್ಲ್ಯಾಮರಸ್ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಸಿಡಿದೆದ್ದಿದ್ದಾರೆ.
ಪತಿ ರಾಜ್ ಕುಂದ್ರಾ ಬಂಧನ ಸುದ್ದಿಯಿಂದ ಆತಂಕಕ್ಕೊಳಗಾಗಿದ್ದ ಶಿಲ್ಪಾ ಶೆಟ್ಟಿ, ಸಾಮಾಜಿಕ ಜಾಲತಾಣದಿಂದ ದೂರವೇ ಉಳಿದಿದ್ದರು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ಡ್ಯಾನ್ಸರ್ ರಿಯಾಲಿಟಿ ಶೋದಿಂದಲೂ ಅವರು ದೂರವಿದ್ದರು. ಇತ್ತೀಚೆಗಷ್ಟೇ ಸ್ವಾತಂತ್ರ್ಯದಿನಾಚರಣೆಯ ಸಂದರ್ಭದಲ್ಲಿ ಶುಭಾಶಯಗಳನ್ನಷ್ಟೇ ಹಂಚಿಕೊಂಡಿದ್ದರು.