ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ "ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ" ಎಂಬ ಹೇಳಿಕೆಯನ್ನು ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನು ಖಂಡಿಸಿರುವ ಮಧ್ಯಪ್ರದೇಶದ ಗೃಹ ಸಚಿವರು ತನಿಖೆಗೆ ಆದೇಶಿಸಿದ್ದಾರೆ.
ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣಾ ಖ್ಯಾತಿ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯೊಂದರಲ್ಲಿ ಶ್ವೇತಾ ತಿವಾರಿ ನಟಿಸಿದ್ದು, ಮಧ್ಯಪ್ರದೇಶದ ಭೋಪಾಲ್ನಲ್ಲಿ ಇತ್ತೀಚೆಗೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಶ್ವೇತಾ, "ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ" (ಮೇರಿ ಬ್ರಾ ಕಾ ಸೈಜ್ ಭಗವಾನ್ ಲೇ ರಹೇ ಹೇ) ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಅನೇಕರು ಇದರ ವಿರುದ್ಧ ಕಿಡಿಕಾರಿದ್ದಾರೆ.