ಮುಂಬೈ :ಹೃದಯಾಘಾತದಿಂದ ಕೊನೆಯುಸಿರೆಳಿದಿದ್ದ ಕಿರುತರೆ ಹಾಗೂ ಚಲನಚಿತ್ರ ನಟ ಸಿದ್ಧಾರ್ಥ್ ಶುಕ್ಲಾ (40)ರ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.
ನಿನ್ನೆ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದರೂ ನಿಖರ ಕಾರಣವನ್ನು ಇನ್ನೂ ಪತ್ತೆ ಹಚ್ಚಲಾಗುತ್ತಿದೆ. ಹಿಸ್ಟೊಪಾಥಾಲಜಿ ಬಳಿಕ ಕಾರಣ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.