ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ 'ಏಕೀಕೃತ' ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
34ರ ಹರೆಯದ ನಟ ಸುಶಾಂತ್ ಸಿಂಗ್ ರಜಪೂತ್, ಜೂನ್ 14 ರಂದು ಮುಂಬೈ ಉಪನಗರ ಬಾಂದ್ರಾದ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಂದಿನಿಂದ ಮುಂಬೈ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಕೂಡ ಸುಶಾಂತ್ ಸಹವರ್ತಿಗಳು ದೂರು ದಾಖಲಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಒಂದೇ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವ ಹಿನ್ನೆಲೆ ಏಕೀಕೃತ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಬಿಜೆಪಿ ಮುಖಂಡರೂ ಆಗಿರುವ ವಕೀಲ ಅಜಯ್ ಅಗರ್ವಾಲ್ ಸುಪ್ರೀಂ ಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ, ಎ.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿದೆ.