ಪಾಟ್ನಾ (ಬಿಹಾರ):ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ಯಾರೋ ಕೊಲೆ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅವರ ಮಾವ ಆರ್.ಸಿ. ಸಿಂಗ್ ಒತ್ತಾಯಿಸಿದ್ದಾರೆ.
ಇದು ಕೊಲೆ ಪ್ರಕರಣ. ಬಿಹಾರ ಮತ್ತು ರಜಪೂತ ಮಹಾಸಭಾ ಯುವಕರು ಈ ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಆರ್.ಸಿ. ಸಿಂಗ್ ಹೇಳಿದ್ದಾರೆ.
ಓದಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ..
ಕೆಲವು ದಿನಗಳ ಹಿಂದೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ 28 ವರ್ಷದ ದಿಶಾ ಸಲಿಯನ್ ಅವರ ಆತ್ಮಹತ್ಯೆಯನ್ನು ಉಲ್ಲೇಖಿಸಿರುವ ಆರ್.ಸಿ. ಸಿಂಗ್, ಅವರ ಮಾಜಿ ಮ್ಯಾನೇಜರ್ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಸುಶಾಂತ್ ಸಾವನ್ನಪ್ಪಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಇದರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಲಾಗುವುದು ಎಂದು ಬಾಂದ್ರಾ ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳದಿಂದ ಯಾವುದೇ ಆತ್ಮಹತ್ಯೆ ಟಿಪ್ಪಣಿ ಕಂಡುಬಂದಿಲ್ಲ. ಮರಣೋತ್ತರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.