ಮುಂಬೈ:ಸುಶಾಂತ್ ಸಿಂಗ್ ರಜಪೂತ್ ಸಹೋದರಿ ಪ್ರಿಯಾಂಕಾ ಸಿಂಗ್, ದೆಹಲಿ ಆಸ್ಪತ್ರೆಯ ಡಾ. ತರುಣ್ ಕುಮಾರ್ ಮತ್ತು ಇತರರ ಮೇಲೆ ಐಪಿಸಿ ಮತ್ತು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಂಭಾರ್ ಅವರು ಸುಶಾಂತ್ ಸಹೋದರಿ ಮತ್ತು ನವದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಹೃದ್ರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ತರುಣ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ರಿಯಾ ಚಕ್ರವರ್ತಿ ಮುಂಬೈ ಪೊಲೀಸರ ಮುಂದೆ ಐಪಿಸಿ, ಎನ್‌ಡಿಪಿಎಸ್ ಕಾಯ್ದೆ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್‌ಲೈನ್ಸ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ದೂರು ದಾಖಲಿಸಿದ್ದಾರೆ.
ಸುಶಾಂತ್ ಸಹೋದರಿ ಪ್ರಿಯಾಂಕಾ, ಸುಶಾಂತ್ ಸಿಂಗ್ಗೆ ಡಾ. ತರುಣ್ ಕುಮಾರ್ ಅವರ ಪ್ರಿಸ್ಕ್ರಿಪ್ಷನ್ ಕಳುಹಿಸಿದ್ದು, ಅವರು 'ಮಾದಕ ವಸ್ತು ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, 1985'ರ ಅಡಿಯಲ್ಲಿ ನಿಯಂತ್ರಿಸಲ್ಪಡುವ ಔಷಧಿಗಳನ್ನು ಕಾನೂನಿನ ಪ್ರಕಾರ ಯಾವುದೇ ಸಮಾಲೋಚನೆಯಿಲ್ಲದೆ ಸುಶಾಂತ್ಗೆ ಸೂಚಿಸಿದ್ದಾರೆ" ಎಂದು ದೂರಿನಲ್ಲಿ ತಿಳಿಸಲಾಗಿದೆ.
"ವೈದ್ಯರು (ಡಾ. ತರುಣ್ ಕುಮಾರ್) ಶಿಫಾರಸು ಮಾಡಿದ ಔಷಧಿಗಳನ್ನು 2020ರ ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್‌ಲೈನ್ಸ್ ಅಡಿಯಲ್ಲಿ ಶಿಫಾರಸು ಮಾಡುವುದನ್ನು ನಿಷೇಧಿಸಲಾಗಿದೆ" ಎಂದು ದೂರಿನಲ್ಲಿ ತಿಳಿಸಲಾಗಿದೆ.