ನವದೆಹಲಿ: ಕೋವಿಡ್ ಸೋಂಕು ಎಲ್ಲೆಡೆಯೂ ವೇಗವಾಗಿ ಹರಡುತ್ತಿದೆ. ಅನೇಕ ಸೆಲೆಬ್ರಿಟಿಗಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಟಿ ಸ್ವರಾ ಭಾಸ್ಕರ್ ಅವರಲ್ಲೂ ಕೋವಿಡ್ ಸೋಂಕು ದೃಢಪಟ್ಟಿದ್ದು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಜನವರಿ 5ರಿಂದ ಐಸೋಲೇಷನ್ನಲ್ಲಿದ್ದು, ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸ್ವರಾ ಮನವಿ ಮಾಡಿದ್ದಾರೆ.