ಮುಂಬೈ (ಮಹಾರಾಷ್ಟ್ರ):ಬಾಲಿವುಡ್ ದಿವಾ ಕತ್ರಿನಾ ಕೈಫ್ ಮತ್ತು ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಮ್ಮ ಮುಂಬರುವ ಸಿನಿಮಾ 'ಟೈಗರ್ 3' ಚಿತ್ರೀಕರಣಕ್ಕಾಗಿ ಈ ವಾರದ ಆರಂಭದಲ್ಲಿ ನವದೆಹಲಿಗೆ ತೆರಳಿದ್ದರು. ಇಂದು ಬೆಳಗ್ಗೆ ದೆಹಲಿಯಿಂದ ಹಿಂದಿರುಗಿದ ಈ ಜೋಡಿ ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿತು.
10 -12 ದಿನಗಳ ಕಾಲ ದೆಹಲಿಯಲ್ಲಿ ಚಿತ್ರತಂಡ ಶೂಟಿಂಗ್ ಮಾಡಲಿದೆ ಎಂದು ವರದಿಯಾಗಿತ್ತು. ಆದರೆ, ಐದೇ ದಿನಕ್ಕೆ ಹಿಂದಿರುಗಿದ್ದಾರೆ. 'ಟೈಗರ್ 3' ಚಿತ್ರದಲ್ಲಿ ಇಮ್ರಾನ್ ಹಶ್ಮಿ ನೆಗೆಟಿವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಇವರೂ ಕೂಡ ಮುಂಬೈನ ವಿಮಾನ ನಿಲ್ದಾಣದಲ್ಲಿ ಸಲ್ಮಾನ್-ಕತ್ರಿನಾ ಜೊತೆ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.