ಹೈದರಾಬಾದ್:ಬಾಲಿವುಡ್ ನಟ ವಿಕ್ಕಿ ಕೌಶಲ್ ಇಂದು ಕೊರೊನಾ ಪರೀಕ್ಷೆಗೊಳಗಾಗಿದ್ದು, ತಮಗೆ ನೆಗೆಟಿವ್ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಖುಷಿ ಹಂಚಿಕೊಂಡಿದ್ದಾರೆ.
ವಾರದ ಹಿಂದೆ ನನ್ನಲ್ಲಿ ಪಾಸಿಟಿವ್ ಕಾಣಿಸಿಕೊಂಡಿತ್ತು. ಈಗ ನಾನು ಮತ್ತೆ ಕೊರೊನಾ ಪರೀಕ್ಷೆಗೊಳಗಾಗಿದ್ದು, ವರದಿ ನೆಗೆಟಿವ್ ಬಂದಿದೆ. ನನ್ನ ಚೇತರಿಕೆಗಾಗಿ ಪ್ರಾರ್ಥನೆ ಮಾಡಿಕೊಂಡ ಎಲ್ಲ ಅಭಿಮಾನಿಗಳಿಗೂ ಧನ್ಯವಾದ ಎಂದು ಶೀರ್ಷಿಕೆ ಬರೆದುಕೊಂಡು ಖುಷಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೊರೊನಾದಿಂದ ಎಚ್ಚರದಿಂದಿರಿ ಹಾಗೂ ಸುರಕ್ಷಿತವಾಗಿರಿ ಎಂದು ಸಲಹೆ ಸಹ ನೀಡಿದ್ದಾರೆ.