ಚೆನ್ನೈ(ತಮಿಳುನಾಡು):ಮಾಜಿ ಸಿಎಂ ಜಯಲಲಿತಾ ಅವರ ಆಪ್ತೆ ವಿ.ಕೆ ಶಶಿಕಲಾ ಅವರು ನಟ ರಜಿನಿಕಾಂತ್ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಜಿನಿಕಾಂತ್ ಅವರ ಪತ್ನಿ ಲತಾ ರಜಿನಿಕಾಂತ್ ಕೂಡ ಉಪಸ್ಥಿತರಿದ್ದರು.
ಸೂಪರ್ ಸ್ಟಾರ್ ರಜಿನಿಕಾಂತ್ ಭೇಟಿ ಮಾಡಿದ ವಿಕೆ ಶಶಿಕಲಾ.. - ಚೆನ್ನೈನ ಪೋಯಸ್ ಗಾರ್ಡ್‌ನಲ್ಲಿರುವ ರಜಿನಿ ನಿವಾಸ
ಎಐಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಇಂದು ಚೆನ್ನೈನಲ್ಲಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿ, ಸೂಪರ್ ಸ್ಟಾರ್ ದಂಪತಿ ಜತೆಗೆ ಮಾತುಕತೆ ನಡೆಸಿದ್ದಾರೆ..
ಸೂಪರ್ ಸ್ಟಾರ್ ರಜಿನಿಕಾಂತ್ ಭೇಟಿ ಮಾಡಿದ ವಿಕೆ ಶಶಿಕಲಾ..
ಈ ಬಗ್ಗೆ ಮಾಹಿತಿ ನೀಡಿರುವ ಶಶಿಕಲಾ, ರಜಿನಿಕಾಂತ್ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ಇದೇ ವೇಳೆ ಸಿನಿ ಕ್ಷೇತ್ರದಲ್ಲಿನ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿರುವುದಾಗಿ ಹೇಳಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ರಜಿನಿಕಾಂತ್ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗೆ ಮನೆಗೆ ವಾಪಸ್ ಆಗಿದ್ದರು.