ನವದೆಹಲಿ :ದೇಶದ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ (controversial remarks) ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಪದ್ಮಶ್ರೀ ಪ್ರಶಸ್ತಿಗೆ ಅರ್ಹರಲ್ಲ. ಕೇಂದ್ರ ಸರ್ಕಾರವು ಅವರಿಗೆ ನೀಡಲಾಗಿರುವ ಪದ್ಮಶ್ರೀ (Padma Shri ) ಪ್ರಶಸ್ತಿಯನ್ನು ತಕ್ಷಣ ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ನವಾಬ್ ಮಲಿಕ್ (Nawab Malik) ಒತ್ತಾಯಿಸಿದ್ದಾರೆ.
ಇಂದು ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ನಟಿ ರಣಾವತ್ ಸ್ವಾತಂತ್ರ್ಯ ಹೋರಾಟಗಾರರನ್ನು ಪರೋಕ್ಷವಾಗಿ ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ.