ಕರ್ನಾಟಕ

karnataka

ETV Bharat / sitara

ಸಹೋದರ ಕೋಮಲ್ ಬಚಾವ್​.. ಮುಚ್ಚಿಟ್ಟ ಸತ್ಯ ಬಿಚ್ಚಿಟ್ಟ ನಟ ಜಗ್ಗೇಶ್​! - ನಟ ಜಗ್ಗೇಶ್ ಟ್ವೀಟ್​

ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ! ಅವನಿಗೆ ಸಹಾಯ ಮಾಡಿದ ಡಾ.ಮಧುಮತಿ, ನಾದಿನಿ ಡಾ.ಲಲಿತಾ, ನರ್ಸ್‌ಗಳ ಪಾದಕ್ಕೆ ನನ್ನ ನಮನ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದು, ರಾಯರಿಗೆ ನಮಸ್ಕಾರ ಮಾಡಿದ್ದಾರೆ.

jaggesh komal
ಕೋಮಲ್​-ಜಗ್ಗೇಶ್​

By

Published : Apr 27, 2021, 6:14 PM IST

Updated : Apr 27, 2021, 10:13 PM IST

ದೇಶಾದ್ಯಂತ ಮಹಾಮಾರಿ ಕೊರೊನಾ 2ನೇ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಹೊಸ ಸೋಂಕಿತರ ಸಂಖ್ಯೆ ದಿನೇ ದಿನೆ ಏರುಗತಿಯಲ್ಲಿಯೇ ಸಾಗುತ್ತಿದೆ. ಹೀಗಾಗಿ, ವೈರಸ್​ನಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಲೇ ಸಾಗಿದೆ. ನಿನ್ನೆಯಷ್ಟೇ ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ಕೆ. ರಾಮು ಕೊರೊನಾಗೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಈಗ ನಟ‌ ಜಗ್ಗೇಶ್ ಸಹೋದರ ಕೋಮಲ್ ಬಗ್ಗೆ ಇಷ್ಟುದಿನ ಮುಚ್ಚಿಟ್ಟಿದ್ದ ಸತ್ಯವನ್ನು ಇದೀಗ ಬಾಯ್ಬಿಟ್ಟಿದ್ದಾರೆ.

ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್​ ಮಾಡುವ ಮೂಲಕ ತಮ್ಮ ಮನದಾಳದ ಮಾತುಗಳನ್ನು ನಟ ಹಂಚಿಕೊಂಡಿದ್ದಾರೆ. ಜೊತೆಗೆ ಸಾವಿನ ದವಡೆಯಿಂದ ತನ್ನ ತಮ್ಮನನ್ನು ಪಾರು ಮಾಡಿದ ರಾಯರಿಗೆ ಅವರು ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ.

ನಾನು ಇಷ್ಟು ದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು. ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ. ಅದು ಒಂದೇ. ರಾಯರೇ, ನಾನು ಕಾಯಾ ವಾಚಾ ಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ, ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೇ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗೂ ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ - ತಾಯಿಯನ್ನು ನೋಯಿಸದೇ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಠೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯದಲ್ಲಿದ್ದರೆ ಸಾವಿನ ಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು. ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು! ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾನೆ ಅಂತಾ ಜಗ್ಗೇಶ್ ಟ್ವೀಟ್​ ಮಾಡಿದ್ದಾರೆ.

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು, ಸ್ವಂತ ವ್ಯವಹಾರವನ್ನು ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ. ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್​ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು. ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ ಸೀರಿಯಸ್​ ಆಗಿಬಿಟ್ಟ. ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ. ಅವನಿಗೆ ಸಹಾಯ ಮಾಡಿದ ಡಾ. ಮಧುಮತಿ, ನಾದನಿ ಡಾ. ಲಲಿತಾ ನರ್ಸ್​ಗಳ ಪಾದಕ್ಕೆ ನನ್ನ ನಮನ. ರಾಯರೆ ಅಂತಾ ಸರಣಿ ಟ್ಟೀಟ್ ಮಾಡಿದ್ದಾರೆ.

ಓದಿ:ನನ್ನ ದೇಶವನ್ನು ವಿಷ ವರ್ತುಲದಿಂದ ಪಾರು ಮಾಡಿ: ಅನ್ಯ ರಾಷ್ಟ್ರದ ಮುಂದೆ ಕೈಚಾಚಿದ ನಟಿ ಪ್ರಿಯಾಂಕಾ ಚೋಪ್ರಾ

Last Updated : Apr 27, 2021, 10:13 PM IST

ABOUT THE AUTHOR

...view details