ಜಗತ್ತಿನ ಸಸ್ಯ ಹಾಗೂ ಪ್ರಾಣಿ ಪ್ರಭೇದಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಮಾರ್ಚ್ 3ರಂದು ವಿಶ್ವ ವನ್ಯ ಜೀವಿ ದಿನಾಚರಣೆಯನ್ನು ಆಚರಿಸಲಾಗುತ್ತದೆ. 2013ರಲ್ಲಿ ವಿಶ್ವಸಂಸ್ಥೆ ಸಮಾವೇಶದಲ್ಲಿ ಮಾರ್ಚ್ 3ರನ್ನು ವಿಶ್ವ ವನ್ಯಜೀವಿಗಳ ದಿನವೆಂದು ಘೋಷಿಸಲಾಯಿತು.
ಸಿಂಹ, ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಪ್ರಾಣಿಗಳ ಚರ್ಮ, ಉಗುರು, ಕೊಂಬು, ದಂತಗಳ ಮಾರಾಟ ಅಕ್ರಮವಾಗಿ ನಡೆಯುತ್ತಿದೆ. ಇದರಿಂದ ಹಲವು ವನ್ಯಜೀವಿಗಳ ಸಂತತಿ ಅಳಿವಿನಂಚಿನಲ್ಲಿದೆ. ಈ ಹಿನ್ನೆಲೆ ವನ್ಯಜೀವಿಗಳು ಮತ್ತು ಅರಣ್ಯ ಸಂಪತ್ತಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವದಾದ್ಯಂತ ವಿಶ್ವ ವನ್ಯಜೀವಿ ದಿನವನ್ನು ಪ್ರತಿವರ್ಷ ಮಾರ್ಚ್ 3ರಂದು ಆಚರಿಸಲಾಗುತ್ತದೆ. ನಟ ದರ್ಶನ್ ಕೂಡ ವನ್ಯಜೀವಿ ರಕ್ಷಣೆಗೆ ನಿಂತಿದ್ದಾರೆ.