ಇದೇ ಭಾನುವಾರ ನಟ ಆ ದಿನಗಳು ಚೇತನ್ ತನ್ನ ಪ್ರೇಯಸಿ ಮೇಘಾ ಜೊತೆ ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ವಿಚಾರ ಆರಂಭವಾಗದಾಗಿನಿಂದಲೂ ಒಂದಲ್ಲ ಒಂದು ರೀತಿ ಸುದ್ದಿ ಆಗ್ತಾನೆ ಇದೆ.
ಅನಾಥ ಮಕ್ಕಳಿಗೆ ಹಾಸಿಗೆ ಕೊಟ್ಟ ಆ ದಿನಗಳು ಚೇತನ್
ನಟ ಚೇತನ್ ಬೆಂಗಳೂರಿನ ಗಾಂಧಿ ಭವನದ ಪಕ್ಕದಲ್ಲಿರುವ ವಿನೋಭಾ ಭಾವೆ ಭವನದಲ್ಲಿ ಮದುವೆಯಾಗುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆ ವ್ಯವಸ್ಥೆಯನ್ನು ಮಾಡಿದ್ದಾರೆ. ಈ ಬಗ್ಗೆ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಶೇರ್ ಮಾಡಿದ್ದಾರೆ.
ಚೇತನ್ ತನ್ನ ಮದುವೆಯನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು, ಫೆಬ್ರವರಿ 2 ರಂದು ಬೆಂಗಳೂರಿನ ಗಾಂಧಿ ಭವನದ ಪಕ್ಕದಲ್ಲಿರುವ ವಿನೋಭಾ ಭಾವೆ ಭವನದಲ್ಲಿ ಮದುವೆಯಾಗುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆ ವ್ಯವಸ್ಥೆಯನ್ನು ಮಾಡಿದ್ದಾರೆ. ಈ ಬಗ್ಗೆ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ನಟ ಚೇತನ್, ಮೇಘಾ, ವಿನಯ್, ಮತ್ತು ನಾನು ಮಕ್ಕಳಿಗೆ ಹಾಸಿಗೆ ಒದಗಿಸುವ ಕೆಲಸ ಮಾಡುತ್ತಿದ್ದೇವೆ. ಆಶ್ರಮ ಮಕ್ಕಳಿಗೆ ಹಾಸಿಗೆ ನೀಡಲು ನಾವು ತಯಾರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.