ರಣಂ ಚಿತ್ರದ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಸಾವನ್ನಪ್ಪಿರುವ ಕುಟುಂಬದ ನೆರವಿಗೆ ನಟ ಚೇತನ್ ಮುಂದಾಗಿದ್ದಾರೆ. ಇಂದು ತಮ್ಮ ಫೇಸ್ಬುಕ್ನಲ್ಲಿ ಈ ವಿಚಾರ ಅವರು ಖಚಿತಪಡಿಸಿದ್ದಾರೆ.
ನಿನ್ನೆ ಬಾಗಲೂರಿನ ಶೆಲ್ ಕಂಪನಿ ಬಳಿ ಫೈಟಿಂಗ್ ಸನ್ನಿವೇಶದ ಶೂಟಿಂಗ್ ನಡೆಯುತ್ತಿತ್ತು. ಸಂಜೆ 4.15 ರ ವೇಳೆಗೆ ರೋಡ್ ಬ್ಲಾಕ್ ಮಾಡಲು ಇಟ್ಟಿದ್ದ ಸಿಲಿಂಡರ್ ಸ್ಫೋಟಗೊಂಡು ಸುಮೇರಾ (29) ಹಾಗೂ ಆಕೆಯ ಮಗಳು ಅಹೇರಾ (8) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಮಗನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕತ್ಸೆ ಕೊಡಿಸಲಾಗುತ್ತಿದೆ.
ಘಟನೆ ಸಂಭವಿಸುತ್ತಿದ್ದಂತೆ ಚಿತ್ರತಂಡ ಅಲ್ಲಿಂದ ಪರಾರಿಯಾಗಿತ್ತು. ಈ ದುರ್ಘಟನೆ ವೇಳೆ ನಟ ಚೇತನ್ ಅಲ್ಲಿರಲಿಲ್ಲ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದರು.