ಕರ್ನಾಟಕ

karnataka

ETV Bharat / sitara

ಲವ್​ ಮಾಕ್ಟೇಲ್​ ಖ್ಯಾತಿಯ ಜೋಡಿ ಡಾರ್ಲಿಂಗ್​ ಕೃಷ್ಣ - ಮಿಲನಾಗೆ ಕೊರೊನಾ ದೃಢ! - ಲವ್ ಮಾಕ್ಟೇಲ್​ ಜೋಡಿ

ಸ್ಯಾಂಡಲ್​ವುಡ್​ನ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್​ಗೆ ಕೊರೊನಾ ಸೋಂಕು ತಗುಲಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

Actor darling krishna and milana
Actor darling krishna and milana

By

Published : Apr 14, 2021, 7:14 PM IST

ಲವ್​ ಮಾಕ್ಟೇಲ್​ ಖ್ಯಾತಿಯ ಸ್ಯಾಂಡಲ್​ವುಡ್​ ಜೋಡಿ ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಗೋವಾದಲ್ಲಿ 'ಶುಗರ್ ಫ್ಯಾಕ್ಟರಿ' ಸಿನಿಮಾ ಶೂಟಿಂಗ್‌ನಲ್ಲಿ ಡಾರ್ಲಿಂಗ್ ಕೃಷ್ಣ ಭಾಗಿಯಾಗಿದ್ದರು. ಈ ವೇಳೆ, ಅವರ ಪತ್ನಿ ಮಿಲನಾ ನಾಗರಾಜ್ ಕೂಡ ಉಳಿದುಕೊಂಡಿದ್ದರು. ಸಿನಿಮಾ ಶೂಟಿಂಗ್​ ನಿನ್ನೆ ಮುಕ್ತಾಯಗೊಂಡಿರುವ ಕಾರಣ ಸಿನಿಮಾ ತಂಡ ಕೊರೊನಾ ಪರೀಕ್ಷೆಗೊಳಪಟ್ಟಿತ್ತು. ಇದರ ಬೆನ್ನಲ್ಲೇ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಟ್ವೀಟ್ ಮಾಡಿದ ಡಾರ್ಲಿಂಗ್ ಕೃಷ್ಣ

ಎಲ್ಲರಿಗೂ ನಮಸ್ಕಾರ, ನನಗೆ ಹಾಗೂ ಮಿಲನಾ ನಾಗರಾಜ್‌ಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಡಾರ್ಲಿಂಗ್‌ ಕೃಷ್ಣ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಎರಡನೇ ಹಂತದ ಕೋವಿಡ್​ ಅಬ್ಬರ ಜೋರಾಗಿದ್ದು, ಈಗಾಗಲೇ ಅನೇಕ ಸೆಲೆಬ್ರಿಟಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ABOUT THE AUTHOR

...view details