ನಟಿ, ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 56ನೇ ವಸಂತಕ್ಕೆ ಕಾಲಿಡುತ್ತಿರುವ ಪಂಚಭಾಷಾ ನಟಿ ಸುಮಲತಾ ಅವರಿಗೆ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ವಿಜಯ್ ಲಕ್ಷ್ಮಿ ಅವರು ಪ್ರೀತಿಯಿಂದ ಸುಮಲತಾಗೆ ಬರ್ತ್ಡೇ ವಿಶ್ ಮಾಡಿದ್ದಾರೆ. ಇಂದು ಟ್ವಿಟ್ಟರ್ಲ್ಲಿ ಶುಭಕೋರಿರುವ ದರ್ಶನ್ ದಂಪತಿ, ಪ್ರೀತಿಯ ಮದರ್ ಇಂಡಿಯಾಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ನಿಮ್ಮ ಇಷ್ಟಾರ್ಥಗಳೆಲ್ಲ ಈಡೇರಲಿ. ಮಂಡ್ಯ ಜಿಲ್ಲೆಗೆ ನೀವು ಮಾಡಬೇಕೆಂದುಕೊಂಡಿರುವ ಕೆಲಸಗಳೆಲ್ಲವೂ ಸುಸೂತ್ರವಾಗಿ ನಡೆಯಲಿ. ಸದಾ ನಿಮ್ಮೊಂದಿಗೆ ನಾವು ಇರುತ್ತೇವೆ ಎಂದು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ.