'ಬಜಾರ್' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಧನ್ವೀರ್ ಅಭಿನಯದ ಮೂರನೇ ಸಿನಿಮಾಗೆ ವಾಮನ ಎಂಬ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ರಿವೀಲ್ ಆಗಿದೆ. ಫಸ್ಟ್ ಲುಕ್‌ನಲ್ಲಿ ಕೈಯಲ್ಲಿ ಚಾಕು ಹಿಡಿದು ಧನ್ವೀರ್ ಖಡಕ್ ಲುಕ್‌ನಲ್ಲಿ ಮಿಂಚಿದ್ದಾರೆ.
ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿರುವ ಶಂಕರ್ ರಾಮನ್ ಈ ಚಿತ್ರಕ್ಕೆ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ತಮ್ಮ ಸಿನಿಮಾ ಬದುಕಿನ 13 ವರ್ಷದ ಅನುಭವವನ್ನು ಸಿನಿಮಾಗೆ ಧಾರೆ ಎರೆಯುತ್ತಿರುವ ಶಂಕರ್ ರಾಮನ್, ಮಾಫಿಯಾ ಲೋಕದ ಕಥೆ ಜೊತೆ ಆ್ಯಕ್ಷನ್ ಎಂಟರ್‌ಟ್ರೈನರ್ ವಾಮನ ಸಿನಿಮಾವನ್ನು ಧನ್ವೀರ್ಗೆ ಸಿದ್ಧಪಡಿಸಿದ್ದಾರೆ.