ಕೆಲ ದಿನಗಳ ಹಿಂದೆ ನಟ ದುನಿಯಾ ವಿಜಯ್, ಕೊರೊನಾದಿಂದಾಗಿ ನನ್ನ ತಾಯಿಯ ಆರೋಗ್ಯ ಸರಿಯಿಲ್ಲ. ಈ ಕೊರೊನಾ ಸಂದರ್ಭದಲ್ಲಿ ಹೆತ್ತ ತಂದೆ-ತಾಯಿಯನ್ನ ದೂರು ಮಾಡಬೇಡಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದರು.
ಇದೀಗ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಕಳೆದ 20 ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರಂತೆ. ಕೆಲ ದಿನಗಳ ಹಿಂದಷ್ಟೇ ಕೋವಿಡ್ನಿಂದ ಚೇತರಿಸಿಕೊಂಡಿದ್ದ ನನ್ನ ತಾಯಿಯ ಆರೋಗ್ಯ ಹದಗೆಟ್ಟಿದೆ ಎಂದು ಭಾವುಕರಾಗಿ ತಿಳಿಸಿದ್ದಾರೆ ವಿಜಯ್.