ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಐವರು ಆರೋಪಿಗಳ ಬಂಧಿಸಿರುವ ಪೊಲೀಸರಿಗೆ ಹಲವರು ಅಭಿನಂದಿಸಿದ್ದಾರೆ. ಅದೇ ರೀತಿ ಸ್ಯಾಂಡಲ್ವುಡ್ ನಟ ಜಗ್ಗೇಶ್ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಘೋಷಿಸಿದ್ದಾರೆ.
ಜಗ್ಗೇಶ್ ಟ್ಟೀಟ್ಟರ್ ಖಾತೆಯಲ್ಲಿ, ಹೆಣ್ಣನ್ನು ಗೌರವಿಸದವರು ರಾಕ್ಷಸರು ಎಂದು ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದರು. ಇದೀಗ ಈ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ನಾಲ್ಕು ದಿನಗಳ ಬಳಿಕ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಈ ಖಾಕಿ ತಂಡಕ್ಕೆ ವೈಯಕ್ತಿಕವಾಗಿ ಜಗ್ಗೇಶ್ ಒಂದು ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.