ನಾಳೆ ಕೋಟೆ ನಗರಿ ಚಿತ್ರದುರ್ಗದಲ್ಲಿ ನಡೆಯಬೇಕಿದ್ದ ಪೈಲ್ವಾನ್ ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಕಿಚ್ಚ ಸುದೀಪ್ ಮುಂದೂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆ ಅಭಿನಯ ಚಕ್ರವರ್ತಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೈಲ್ವಾನ್ ಹಾಡುಗಳ ಅನಾವರಣಕ್ಕೆ ಚಿತ್ರರಂಗದಲ್ಲಿ ವೇದಿಕೆ ಸಿದ್ಧವಾಗಿತ್ತು. ವರಮಹಾಲಕ್ಷ್ಮಿ ಹಬ್ಬದ ದಿನವಾದ ನಾಳೆ ಅದ್ಧೂರಿಯಾಗಿ ಪೈಲ್ವಾನ್ ಗಾನಬಜಾನಾ ರಿಲೀಸ್ ಆಗಬೇಕಿತ್ತು. ಆದರೆ, ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭೀಕರ ಮಳೆಯಿಂದ ಉತ್ತರ ಕರ್ನಾಟಕ ಸಂಪೂರ್ಣ ಜಲಾವೃತಗೊಂಡಿದೆ. ಅಲ್ಲಿಯ ಜನರು ಸಂಕಷ್ಟದಲ್ಲಿರುವಾಗ ನಾವು ಸಂಭ್ರಮ ಪಡುವುದು ಸರಿಯಲ್ಲ. ಆದ್ದರಿಂದ ಈ ಕಾರ್ಯಕ್ರಮ ಮುಂದೂಡುತ್ತೇನೆ ಎಂದು ಸುದೀಪ್ ತಿಳಿಸಿದ್ದಾರೆ.