ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇಂದು ಬೆಳಗ್ಗೆಯಷ್ಟೇ 10 ಸಚಿವರು ಸೇರಿದಂತೆ 20ಕ್ಕೂ ಅಧಿಕ ಶಾಸಕರಿಗೆ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ನಟಿ ಮೃಣಾಲ್ ಠಾಕೂರ್ಗೂ ಕೋವಿಡ್ ಸೋಂಕು ತಗುಲಿರುವುದು ಖಚಿತಗೊಂಡಿದೆ.
ಇದಕ್ಕೆ ಸಂಬಂಧಿಸಿದಂತೆ ನಟಿ ಮೃಣಾಲ್ ಠಾಕೂರ್ ಇನ್ಸ್ಟಾಗ್ರಾಂನಲ್ಲಿ ಖುದ್ದಾಗಿ ಬರೆದುಕೊಂಡಿದ್ದು, ತನಗೆ ಕೋವಿಡ್ನ ಸೌಮ್ಯ ಪ್ರಮಾಣದ ಗುಣಲಕ್ಷಣ ಕಂಡು ಬಂದಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಪ್ರತ್ಯೇಕವಾಗಿ ಉಳಿದುಕೊಂಡಿದ್ದೇನೆ ಎಂದಿರುವ ನಟಿ, ವೈದ್ಯರು ನೀಡಿರುವ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡ್ತಿದ್ದು, ನನ್ನ ಸಂಪರ್ಕಕ್ಕೆ ಬಂದಿರುವವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.