ನವದೆಹಲಿ:ಬಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಕೋವಿಡ್ ವ್ಯಾಕ್ಸಿನ್ನ ಮೊದಲ ಡೋಸ್ ಪಡೆದುಕೊಂಡಿದ್ದು, ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಶೇರ್ ಮಾಡಿದ್ದಾರೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಕೊರೊನಾ ಸೋಂಕಿಗೊಳಗಾಗಿದ್ದ ಕರಾವಳಿ ಸುಂದರಿ ಪೂಜಾ ಹೆಗ್ಡೆ ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಮೂರು ತಿಂಗಳ ಬಳಿಕ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಈ ಹಿಂದೆ ನನ್ನ ತಾಯಿಯನ್ನು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಕರೆದುಕೊಂಡು ಬಂದಿದ್ದೆ. ಆ ವೇಳೆ ನಾನು ಲಸಿಕೆ ಪಡೆದುಕೊಂಡಿದ್ದರೆ, ಇಂದು ಎರಡನೇ ಡೋಸ್ ಹಾಕಿಸಿಕೊಳ್ಳುತ್ತಿದ್ದೆ ಎಂದಿದ್ದಾರೆ.
ಕೊರೊನಾ ಸೋಂಕಿಗೊಳಗಾಗುವವರು ಮೂರು ತಿಂಗಳ ನಂತರ ಕೋವಿಡ್ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಪೂಜಾ ಹೆಗ್ಡೆ ಇದೀಗ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಪೂಜಾ ಅನೇಕ ಸಂತ್ರಸ್ತರಿಗೆ ಸಹಾಯ ಮಾಡಿದ್ದು, ಅಗತ್ಯ ವಸ್ತುಗಳನ್ನು ನೀಡಿ ಮಾನವೀಯತೆ ಮರೆದಿದ್ದರು.