ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಅನೇಕರು ತಮ್ಮ ಕೈಲಾದಷ್ಟು ದೇಣಿಗೆ ನೀಡಿ ದೇವಸ್ಥಾನ ನಿರ್ಮಾಣಕ್ಕ ಕೈಜೋಡಿಸುತ್ತಿದ್ದಾರೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ! - 1 ಲಕ್ಷ ರೂ ದೇಣಿಗೆ ನೀಡಿದ ಪ್ರಣೀತಾ
ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ. ದೇಣಿಗೆ ನೀಡಿದ್ದೇನೆ ಎಂದು ನಟಿ ಪ್ರಣೀತಾ ಹೇಳಿದ್ದಾರೆ.
Actor pranitha
ಇದೀಗ ನಟಿ ಪ್ರಣೀತಾ ಸುಭಾಷ್ ಕೂಡ 1 ಲಕ್ಷ ರೂ. ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೀವೂ ಕೂಡ ಧನಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಣೀತಾ ಕನ್ನಡದಲ್ಲಿ ದರ್ಶನ್ ಅಭಿನಯದ "ಪೊರ್ಕಿ" ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶಿಸಿ ನಂತರ ತೆಲುಗು, ತಮಿಳು ಸೇರಿ ಅನೇಕ ಭಾಷೆಗಳ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ.